ಸೋಮವಾರ, ಅಕ್ಟೋಬರ್ 18, 2021
25 °C

ರಾಜ್ಯದಲ್ಲಿ ಬಾಕಿಯಿರುವ ಚುನಾವಣೆಗಳಿಗೆ ಹಸಿರು ನಿಶಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಸಹಕಾರ ಸಂಸ್ಥೆಗಳ ಪದಾಧಿಕಾರಿಗಳು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆಗಳನ್ನು ನಡೆಸಲು ಮಂಗಳವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ.

ಸಹಕಾರ ಸಂಘಗಳ ಕಾಯ್ದೆಯಡಿ ನೋಂದಣಿಯಾಗಿರುವ ಸಹಕಾರ ಸಂಘಗಳು, ಸೊಸೈಟಿಗಳು ಮತ್ತು ಸಂಘ, ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯನ್ನು ಕೋವಿಡ್‌ ಕಾರಣದಿಂದ ಡಿಸೆಂಬರ್‌ ಅಂತ್ಯದವರೆಗೂ ಮುಂದೂಡಲು ಜುಲೈನಲ್ಲಿ ನಿರ್ಧರಿಸಲಾಗಿತ್ತು. ಹಲವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದ್ದರೂ, ಮೇಯರ್‌ ಹಾಗೂ ಉಪ ಮೇಯರ್‌, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಬಾಕಿ ಇತ್ತು.

‘ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್‌ ಮತ್ತು ಉಪ ಮೇಯರ್‌ ಹಾಗೂ ಇತರ ಪದಾಧಿಕಾರಿಗಳ ಆಯ್ಕೆಗೆ ಬಾಕಿ ಇರುವ ಚುನಾವಣೆಗಳನ್ನು ನಡೆಸಲು ಮಂಗಳವಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳು, ಸಂಘ, ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳನ್ನೂ ನಡೆಸಲು ಸಂಪುಟ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.