ಸೋಮವಾರ, ಸೆಪ್ಟೆಂಬರ್ 27, 2021
22 °C

ಸಂಚಾರ ನಿರ್ವಹಣೆಗೆ ‘ಜೈಕ’ ನೆರವು: ಸಂಪುಟ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚು ಇರುವ ರಸ್ತೆಗಳಲ್ಲಿ ಜಪಾನ್‌ ಇಂಟರ್‌ ನ್ಯಾಷನಲ್‌ ಕೋಆಪರೇಷನ್‌ ಏಜೆನ್ಸಿ(ಜೈಕ) ನೆರವಿನೊಂದಿಗೆ ಸುಧಾರಿತ ಸಂಚಾರ ಮಾಹಿತಿ ಮತ್ತು ನಿರ್ವಹಣೆ ವ್ಯವಸ್ಥೆಯನ್ನು ಜಾರಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ಯೋಜನೆ ಕಳೆದ ಎರಡು ವರ್ಷಗಳಿಂದ ನನೆಗುದಿಯಲ್ಲಿತ್ತು. ಜೈಕ ನೆರವಿನೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ರಾಜ್ಯ ಸರ್ಕಾರ 2018 ರಲ್ಲಿ ‘ಜೈಕ’ ಜತೆಗೆ ಒಪ್ಪಂದಕ್ಕೆ ಸಹಿ ಮಾಡಿತ್ತು.

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಗರದ 29 ಕಡೆಗಳಲ್ಲಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲಾಗುವುದು. ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಮತ್ತು ಸಂಚಾರ ನಿಬಿಡ ರಸ್ತೆಗಳಲ್ಲಿ ವಾಹನಗಳು ಸುಗಮವಾಗಿ ಸಾಗಲು ಅನುಕೂಲ ಮಾಡುವ ಯೋಜನೆ ಇದಾಗಿದೆ. ವಾಹನಗಳ ದಟ್ಟಣೆ ಕಡಿಮೆ ಆಗಲಿದ್ದು, ಅವುಗಳ ಸಂಚಾರದ ಸರಾಸರಿ ವೇಗವೂ ಹೆಚ್ಚಲಿದೆ. ₹70 ಕೋಟಿ ವೆಚ್ಚದ ಈ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು