ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಡಿಪಿಐ- ಪಿಎಫ್ಐ ನಿಷೇಧ; ಸಂಪುಟ ಸಭೆಯಲ್ಲಿ ಚರ್ಚೆ?

Last Updated 19 ಆಗಸ್ಟ್ 2020, 19:42 IST
ಅಕ್ಷರ ಗಾತ್ರ

ಬೆಂಗಳೂರು: ‘ಡಿ.ಜೆ.ಹಳ್ಳಿ ಸೇರಿದಂತೆ ಹಲವುಗಲಭೆಗಳು ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂಬ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ವಿಷಯ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಮೂಲಗಳು ಹೇಳಿವೆ.

ಪ್ರವಾದಿ ಮಹಮ್ಮದರ ಕುರಿತ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದೆ ಎಂಬ ಕಾರಣ ಮುಂದಿಟ್ಟು ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಹಿಂಸಾಚಾರ ನಡೆದಿತ್ತು. ಇದಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕೆಲವು ಪ್ರಮುಖರನ್ನು ಬಂಧಿಸಲಾಗಿದೆ. ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಚಿವರು ಹಾಗೂ ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ. ಆದರೆ, ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಎಸ್‌ಡಿಪಿಐ ವಿಷಯ ಉಲ್ಲೇಖವಾಗಿಲ್ಲ. ಹೆಚ್ಚುವರಿ ಕಾರ್ಯಸೂಚಿ ಅಡಿ ಈ ವಿಷಯ ಚರ್ಚೆಗೆ ಬರಲಿದೆ ಎಂದು ಮೂಲಗಳು ಹೇಳಿವೆ.

ವಿಧಾನಮಂಡಲ ಅಧಿವೇಶನ ನಡೆಸುವ ಕುರಿತು ಸಂಪುಟ ಸಭೆಯಲ್ಲಿ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

ಅಲ್ಲದೆ, ಕರ್ನಾಟಕ ಲೋಕಸೇವಾ ಆಯೋಗದ ಸುಧಾರಣೆಗೆ ಸಂಬಂಧಿಸಿದಂತೆ ಹೋಟಾ ಸಮಿತಿಯ ಕೆಲವು ಶಿಫಾರಸು ಜಾರಿ, ಭೂಸುಧಾರಣೆ ಕಾಯ್ದೆಗೆ ಎರಡನೇ ತಿದ್ದುಪಡಿ, ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸುವ ಮಾರ್ಗಸೂಚಿ ಪರಿಷ್ಕರಣೆಗೆ ಸಂಪುಟ ಸಭೆ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ಹೇಳಿವೆ.

ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಚಿವರು ಹಾಗೂ ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ. ಆದರೆ, ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಎಸ್‌ಡಿಪಿಐ ವಿಷಯ ಉಲ್ಲೇಖವಾಗಿಲ್ಲ. ಹೆಚ್ಚುವರಿ ಕಾರ್ಯಸೂಚಿ ಅಡಿ ಈ ವಿಷಯ ಚರ್ಚೆಗೆ ಬರಲಿದೆ ಎಂದು ಮೂಲಗಳು ಹೇಳಿವೆ.

ವಿಧಾನಮಂಡಲ ಅಧಿವೇಶನ ನಡೆಸುವ ಕುರಿತು ಸಂಪುಟ ಸಭೆಯಲ್ಲಿ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

ಅಲ್ಲದೆ, ಕರ್ನಾಟಕಲೋಕಸೇವಾ ಆಯೋಗದ ಸುಧಾರಣೆಗೆ ಸಂಬಂಧಿಸಿದಂತೆ ಹೋಟಾ ಸಮಿತಿಯ ಕೆಲವು ಶಿಫಾರಸು ಜಾರಿ, ಭೂಸುಧಾರಣೆ ಕಾಯ್ದೆಗೆ ಎರಡನೇ ತಿದ್ದುಪಡಿ, ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸುವ ಮಾರ್ಗಸೂಚಿ ಪರಿಷ್ಕರಣೆಗೆ ಸಂಪುಟ ಸಭೆ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT