ಸೋಮವಾರ, ಅಕ್ಟೋಬರ್ 26, 2020
20 °C

ಸರ್ಕಾರದ ಕೋವಿಡ್‌ ವೈಫಲ್ಯಕ್ಕೆ ಸಂಪುಟ ಬದಲಾವಣೆಯೇ ಸಾಕ್ಷಿ: ಡಿ.ಕೆ. ಶಿವಕುಮಾರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ ಅನುಭವಿಸಿರುವುದಕ್ಕೆ ಆರೋಗ್ಯ ಸಚಿವರ ಬದಲಾವಣೆಯು ಸಾಕ್ಷಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ಕೋವಿಡ್‌–19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಈ ಸರ್ಕಾರದ ವಿಫಲವಾಗಿದೆ ಎಂಬುದಕ್ಕೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಮಾಡಿರುವ ಸಂಪುಟ ಪುನರಚನೆಯೇ ಸಾಕ್ಷಿ. ಕೋವಿಡ್‌ ನಿಭಾಯಿಸುವಲ್ಲಿನ ಸರ್ಕಾರದ ಅಸಮರ್ಥತೆಯು ಅಪಾರ ಜೀವ, ಜೀವನವನ್ನು ಕಸಿದಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ಆರೋಗ್ಯ ಸಚಿವರ ಬದಲಾವಣೆಯು ಪುಷ್ಟಿ ನೀಡಿದೆ,’ ಎಂದಿದ್ದಾರೆ. 

ಕೋವಿಡ್‌ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಹಲವು ಕೋಟಿ ಮೊತ್ತದ ಭ್ರಷ್ಟಾಚಾರದ ಆರೋಪವನ್ನೂ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು