ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ನೇಮಕ: ಅರ್ಜಿ ಸಲ್ಲಿಸಲು 21 ಕೊನೆ ದಿನ

Last Updated 17 ಜನವರಿ 2022, 17:08 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-21ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

‘ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಅಲ್ಲದೆ, ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ, ನಾನಾ ಮಾನದಂಡಗಳ ಅನ್ವಯ ರಾಜ್ಯ ವ್ಯಾಪ್ತಿಯ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುವುದು. ಅರ್ಜಿ ಸಲ್ಲಿಸಲು ಇದೇ 21 ಕೊನೆಯ ದಿನ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಇಷ್ಟದ 10 ಸರ್ಕಾರಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಆಯ್ಕೆಯಾದವರಿಗೆ ಈ ಕಾಲೇಜುಗಳಲ್ಲೇ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು. ಒಂದು ವೇಳೆ, ಅಭ್ಯರ್ಥಿಗಳ ಆಯ್ಕೆಯ ಕಾಲೇಜುಗಳಲ್ಲಿ ವಾರಕ್ಕೆ 15 ಗಂಟೆಗಳ ಕಾರ್ಯಭಾರ ಇಲ್ಲದಿದ್ದರೆ ಬೇರೆ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಹತೆ ಮತ್ತು ಅಂಕಗಳ ವಿವರ: ನೇಮಕಾತಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಪೈಕಿ ಶೇ 15ರಷ್ಟನ್ನು ಗಣನೆಗೆ ತೆಗೆದುಕೊಂಡು, ಅದಕ್ಕೆ ಗರಿಷ್ಠ 25 ಅಂಕ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಉಳಿದಂತೆ, ಪಿಎಚ್.ಡಿ., ನೆಟ್‌, ಕೆ-ಸೆಟ್, ಕೆ–ಸೆಟ್‌ ಮತ್ತು ಎಂ.ಫಿಲ್ ಪದವಿ ಹೆಚ್ಚುವರಿ ವಿದ್ಯಾರ್ಹತೆ ಎಂದು ಪರಿಗಣಿಸಲಾಗಿದೆ. ಅವುಗಳಿಗೆ ಕ್ರಮವಾಗಿ ಗರಿಷ್ಠ 12, 9 ಮತ್ತು 6 ಅಂಕ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ, ಒಂದು ವರ್ಷಕ್ಕೆ (ಗರಿಷ್ಠ 16 ವರ್ಷಗಳಿಗೆ ಮಾತ್ರ ಅನ್ವಯವಾಗುವಂತೆ 48 ಅಂಕಗಳು) 3 ಅಂಕ ನೀಡಲಾಗುವುದು. ಈ ಅವಧಿಯಲ್ಲಿ ಶೈಕ್ಷಣಿಕ ವರ್ಷದ ಒಂದು ಸೆಮಿಸ್ಟರ್‌ನಲ್ಲಿ ಮಾತ್ರ ಕರ್ತವ್ಯ ನಿರ್ವಹಿಸಿದ್ದರೆ 1.5 ಅಂಕ ನೀಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಅರ್ಜಿ ಸಲ್ಲಿಸಲು– https://dec.karnataka.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT