ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಿಷನರ್‌ ಮಾತು ಸುಳ್ಳು ಎಂಬುದು ಸರ್ಕಾರಕ್ಕೆ, ಸಿಎಂಗೆ ಆದ ಅಪಮಾನ: ಭಾಸ್ಕರ್ ರಾವ್

Last Updated 11 ಏಪ್ರಿಲ್ 2022, 3:54 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಪೊಲೀಸ್‌ ಕಮಿಷನರ್ ಸುಳ್ಳು ಹೇಳಿದ್ದಾರೆ’ ಎಂಬ ರಾಜಕಾರಣಿಗಳ ಮಾತು ಮುಖ್ಯಮಂತ್ರಿಗೆ ಮತ್ತು ಸರ್ಕಾರಕ್ಕೆ ಮಾಡಿದ ಅಪಮಾನ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಎಎಪಿ ನಾಯಕ ಭಾಸ್ಕರ್‌ ರಾವ್‌ ಆಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಸೋಮವಾರ ಅವರು ಟ್ವೀಟ್‌ ಮಾಡಿದ್ದಾರೆ. ‘ಬೆಂಗಳೂರು ಪೊಲೀಸ್ ಆಯುಕ್ತರು ಎಂದರೆ 1.5 ಕೋಟಿ ನಾಗರಿಕರ ರಕ್ಷಿಸುವ ಸಂಸ್ಥೆಯಿದ್ದಂತೆ. ರಾಜ್ಯದ ಆಡಳಿತಾರೂಢ ಪಕ್ಷ ಮತ್ತು ಅದರ ನಾಯಕರೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ. ಉತ್ತಮ ಆಡಳಿತವು ಮೇಲುಗೈ ಸಾಧಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಜೆ.ಜೆ. ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ ಎಂಬ ಯುವಕನ ಕೊಲೆ ನಡೆದಿತ್ತು ಎಂದು ಗೃಹ ಸಚಿವರು ನೀಡಿದ್ದ ಹೇಳಿಕೆ ಸತ್ಯ. ಬೈಕ್‌ಗಳು ತಗುಲಿದ ವಿಚಾರಕ್ಕೆ ಗಲಾಟೆಯಾಗಿ ಕೃತ್ಯ ನಡೆದಿದೆ ಎಂದು ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್ ಇತ್ತೀಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT