ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ಆದೇಶಕ್ಕೆ ಅಭ್ಯರ್ಥಿಗಳಿಂದ ಟ್ವಿಟರ್‌ ಅಭಿಯಾನ

Last Updated 26 ಜನವರಿ 2023, 19:55 IST
ಅಕ್ಷರ ಗಾತ್ರ

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಭ್ಯರ್ಥಿಗಳು ಟ್ವಿಟರ್‌ನಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳು ಈಗಾಗಲೇ ಅಂತಿಮ ಹಂತ ತಲುಪಿವೆ. ಕೋರ್ಟ್‌ನಲ್ಲಿದ್ದ ತಡೆಯಾಜ್ಞೆಯೂ ತೆರವಾಗಿದೆ. ಮಕ್ಕಳ ಗುಣಮಟ್ಟದ ಶಿಕ್ಷಣ ಹಾಗೂ ಅಭ್ಯರ್ಥಿಗಳ ಜೀವನವನ್ನು ಗಮನದಲ್ಲಿ ಇಟ್ಟುಕೊಂಡು ತಕ್ಷಣವೇ ನೇಮಕಾತಿ ಆದೇಶ ನೀಡಬೇಕು ಎಂದು ಕೋರಿದ್ದಾರೆ.

2022ರ ಮಾರ್ಚ್‌ನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 68,849 ಅಭ್ಯರ್ಥಿಗಳು ಸಿಇಟಿ ಬರೆದಿದ್ದರು. ಅವರಲ್ಲಿ 51,098 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. 22,432 ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ 13,363 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT