ಭಾನುವಾರ, ಜುಲೈ 25, 2021
27 °C

ಕೆನರಾ ಬ್ಯಾಂಕ್‌ನಿಂದ ಕೌಶಲಾಭಿವೃದ್ಧಿ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆನರಾ ಬ್ಯಾಂಕ್‌, ಆರ್ಥಿಕವಾಗಿ ಹಿಂದುಳಿದ ಹಾಗೂ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಮಹಿಳೆಯರಿಗಾಗಿ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಐದು ದಿನಗಳ ಈ ಕಾರ್ಯಕ್ರಮವು ಸಂಪೂರ್ಣ ಉಚಿತವಾಗಿರಲಿದೆ. ಇದು ಈ ತಿಂಗಳ ಮೂರನೇ ವಾರದಲ್ಲಿ ಆರಂಭವಾಗಲಿದೆ. ತರಬೇತಿ ಅವಧಿಯಲ್ಲಿ ಮೆಹಂದಿ, ಸೀರೆಯ ಕುಚ್ಚು ಹಾಗೂ ಬಾಗಿಲು ಚಾಪೆ ತಯಾರಿಕೆ ಕುರಿತು ನುರಿತ ಶಿಕ್ಷಕರು ಮಾರ್ಗದರ್ಶನ ನೀಡಲಿದ್ದಾರೆ. ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್‌ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ತರಬೇತಿ ನಿಗದಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ 9900158885 ಅಥವಾ 9448538107 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.