ಭಾನುವಾರ, ಸೆಪ್ಟೆಂಬರ್ 26, 2021
28 °C

ಕಾಂಗ್ರೆಸ್‌ನಲ್ಲಿ ಸಿದ್ದು, ಡಿಕೆಶಿ ಜಾತಿ ಗಣತಿ ಎಂಬುದು ಪ್ರತ್ಯೇಕವೇ?: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಜಾತಿ ಗಣತಿ ಹಾಗೂ ಡಿ.ಕೆ.ಶಿವಕುಮಾರ್ ಅವರ ಜಾತಿ ಗಣತಿ ಎಂಬುದು ಪ್ರತ್ಯೇಕವಾಗಿದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಗಣತಿ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಅವರ ಕಾಂಗ್ರೆಸ್ ಪ್ರವೇಶ ಇದನ್ನೇ ಸೂಚಿಸುತ್ತಿದೆಯಲ್ಲವೇ?’ ಎಂದು ಪ್ರಶ್ನಿಸಿದೆ.

‘ಜಾತಿ ಗಣತಿ ಜಾರಿಗೆ ಕಾಂಗ್ರೆಸ್ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದರು ಎಂಬುದಕ್ಕೆ ಸಾಕ್ಷ್ಯ ಕೊಡಿ ಎಂದಿದ್ದ ಸಿದ್ದರಾಮಯ್ಯನವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?, ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮಿತಿ ರಚಿಸಿರುವ ಸುದ್ದಿಯನ್ನು ಹೇಗೆ ಸ್ವೀಕರಿಸುತ್ತೀರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಚುನಾವಣೆ ಬಂದಾಗ ಯಾವುದೋ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? ಎಂದು ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಇದನ್ನೂ ಓದಿ... ಸಿ.ಎಂ ನಾಲ್ಕು ಬಾರಿ ದೆಹಲಿಗೆ ಹೋಗಿಬಂದರೂ ನಯಾಪೈಸೆ ಉಪಯೋಗವಾಗಿಲ್ಲ: ಕಾಂಗ್ರೆಸ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು