ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿಯ ವರದಿ ಸಲ್ಲಿಕೆಯೇ ಆಗಿಲ್ಲ: ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ

Last Updated 21 ಸೆಪ್ಟೆಂಬರ್ 2020, 16:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ(ಜಾತಿ ಗಣತಿ) ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಅವರು ನಿಯಮ 330ರ ಅಡಿಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, 'ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜು ಅವರ ಅವಧಿ ಕೊನೆಗೊಂಡ ಕಾರಣದಿಂದ ಸರ್ಕಾರಕ್ಕೆ ಅಧಿಕೃತವಾಗಿ ವರದಿ ಸಲ್ಲಿಕೆಯಾಗಿಲ್ಲ‌. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜತೆ ಚರ್ಚಿಸಿ ಶೀಘ್ರದಲ್ಲಿ ಆಯೋಗಕ್ಕೆ ನೂತನ ಅಧ್ಯಕ್ಷರು ಮತ್ತು ಸದಸ್ಯರ ನೇಮಕಕ್ಕೆ ಕ್ರಮ‌ ಕೈಗೊಳ್ಳಲಾಗುವುದು. ಬಳಿಕ ಆಯೋಗದಿಂದ ವರದಿ ಪಡೆದುಕೊಳ್ಳಲಾಗುವುದು' ಎಂದು ಭರವಸೆ ನೀಡಿದರು.

ಸಮೀಕ್ಷೆ ನಡೆಸಲು ₹ 162.77 ಕೋಟಿ ವೆಚ್ಚ ಮಾಡಲಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ದೃಷ್ಟಿಯಿಂದ ಈ ವರದಿ ಮಹತ್ವದ್ದಾಗಿದೆ ಎಂದು ಸಚಿವರು ಹೇಳಿದರು.

‘ಜಾತಿ ಆಧಾರಿತ ಗಣತಿಯ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಬೇಕು. ರಾಜ್ಯದಲ್ಲಿ ಯಾವ ಜಾತಿಯ ಜನರ ಸಂಖ್ಯೆ ಎಷ್ಟಿದೆ ಎಂಬುದನ್ನು ಬಹಿರಂಗಪಡಿಸಬೇಕು. ಈ ವರದಿಯ ಆಧಾರದಲ್ಲೇ ಹಿಂದುಳಿದ ವರ್ಗಗಳ ಜನರಿಗೆ ಸೌಲಭ್ಯ ನೀಡಬೇಕು’ ಎಂದು ನಂಜುಂಡಿ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT