ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಲಕಾವೇರಿಯಲ್ಲಿ ತೀರ್ಥಸ್ನಾನ ಬದಲು ತೀರ್ಥ ಪ್ರೋಕ್ಷಣೆ

ತೀರ್ಥೋದ್ಭವ: ಹೊರ ರಾಜ್ಯದ ಭಕ್ತರಿಗೆ ಕೋವಿಡ್‌–19 ನೆಗೆಟಿವ್‌ ವರದಿ ಕಡ್ಡಾಯ
Last Updated 3 ಅಕ್ಟೋಬರ್ 2020, 13:42 IST
ಅಕ್ಷರ ಗಾತ್ರ

ಮಡಿಕೇರಿ: ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸಬೇಕು. ಪೂಜಾ ವಿಧಿ ವಿಧಾನಗಳಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸಲಹೆ ನೀಡಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ತಲಕಾವೇರಿ ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು.

ಪೂಜಾ ಕೈಂಕರ್ಯದಲ್ಲಿ ಯಾವುದೇ ರೀತಿಯ ಸಣ್ಣ ಲೋಪ ಉಂಟಾಗದಂತೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಬೇಕು ಎಂದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಭಾಗಮಂಡಲ ತಲಕಾವೇರಿ ಜಾತ್ರೆಯನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಹೇಗೆ ನಿಭಾಯಿಸಬೇಕಿದೆ ಎಂದು ಯೋಚಿಸಬೇಕಿದೆ. ಕಳೆದ ಬಾರಿ ತೀರ್ಥೋದ್ಭವ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಪೌರರರು ತಲಕಾವೇರಿಯಲ್ಲಿ ತಕ್ಕ ಮುಖ್ಯಸ್ಥರು ಉಳಿದುಕೊಳ್ಳಲು ಪುನರ್ ನಿರ್ಮಾಣಕ್ಕೆ ಹಣ ನೀಡಿದ್ದು, ಅದರಂತೆ ಅಂದಾಜು ಪಟ್ಟಿ ಸಿದ್ಧವಾಗಿದ್ದು, ಇದಕ್ಕೆ ಸಹಕರಿಸಬೇಕಿದೆ ಎಂದು ಅವರು ತಿಳಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿಕೊಡಬೇಕು ಎಂದು ಸಲಹೆ ಮಾಡಿದರು.

ತಲಕಾವೇರಿ ಜಾತ್ರೆಗೆ ತೆರಳುವವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು ಹೋಗಬೇಕು ಎಂದು ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು.

ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರು, ಪಿಂಡ ಪ್ರಧಾನ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳಲಾಗುವುದು. ಕೊಳದಲ್ಲಿ ತೀರ್ಥಸ್ನಾನ ಬದಲಾಗಿ ತೀರ್ಥ ಪ್ರೋಕ್ಷಣೆ ಮಾಡಲಾಗುವುದು ಎಂದು ಹೇಳಿದರು.

ಪೊಲೀಸ್ ಇಲಾಖೆ ಅವರು ಅಗತ್ಯ ಬ್ಯಾರಿಕೇಡ್ ನಿರ್ಮಾಣ ಹಾಗೂ ಬಂದೋಬಸ್ತ್ ಮಾಡಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಕೋವಿಡ್ ಸಂಬಂಧಿಸಿದಂತೆ ಜಾಗೃತಿ ಮೂಡಿಸಬೇಕು. ಈ ಬಾರಿ ಯಾವುದೇ ರೀತಿಯ ವಾಹನಗಳಿಗೆ ಪಾಸ್ ಇರುವುದಿಲ್ಲ ಎಂದು ಬಿ.ಎಸ್.ತಮ್ಮಯ್ಯ ಅವರು ತಿಳಿಸಿದರು.

ತೀರ್ಥೋದ್ಭವಕ್ಕೆ ಬರುವ ಹೊರ ರಾಜ್ಯದ ಭಕ್ತರು, ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡೇ ಬರಬೇಕು. ಅದರ ನೆಗೆಟಿವ್‌ ವರದಿಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಆದಷ್ಟು ಮಕ್ಕಳು, ವೃದ್ಧರು ಬರಬಾರದು ಎಂದು ಸಚಿವರು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ದಸರಾ ಸಮಿತಿ ಅಧ್ಯಕ್ಷರಾದ ರಾಬಿನ್ ದೇವಯ್ಯ ಇತರರು ಇದ್ದರು.

ಸಭೆಯಲ್ಲಿ ಬಂದ ಸೂಚನೆಗಳು

ಜನರಿಗೆ ತೊಂದರೆ ಆಗದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು.

ಬೀದಿದೀಪಗಳ ವ್ಯವಸ್ಥೆ, ಭಾಗಮಂಡಲ- ತಲಕಾವೇರಿ ಕಾಲುದಾರಿ ದುರಸ್ತಿ ಬಸ್ ಶೆಲ್ಟರ್‌ಗಳಿಗೆ ಸುಣ್ಣ ಬಣ್ಣ ಬಳಿಯಬೇಕು. ಬೀದಿದೀಪ, ಶುಚಿತ್ವ, ಸ್ವಾಗತ ಕೋರುವ ಬ್ಯಾನರ್ ಅಳವಡಿಸುವ ಕಾರ್ಯವಾಗಬೇಕು.

ಲೋಕೋಪಯೋಗಿ ಇಲಾಖೆ ವತಿಯಿಂದ ಭಾಗಮಂಡಲಕ್ಕೆ ಸೇರುವ ಎಲ್ಲ ರಸ್ತೆಗಳ ದುರಸ್ತಿ ಕಾರ್ಯವಾಗಬೇಕು.

ಭಾಗಮಂಡಲ- ತಲಕಾವೇರಿಗಳಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು.

ಪ್ರಥಮ ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಆಗಬೇಕು.

ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24 ಗಂಟೆಗಳ ವೈದ್ಯರ ಸೇವೆ, ಅಗತ್ಯ ಔಷಧ ಸಿದ್ಧವಿರಬೇಕು.

ಸ್ಥಳೀಯ ಹೋಟೆಲ್‌ಗಳಲ್ಲಿ ಉತ್ತಮ ಗುಣಮಟ್ಟದ ಆಹಾರದ ಪರಿಶೀಲನೆ ಕಾರ್ಯವನ್ನು ಕೈಗೊಳ್ಳಬೇಕು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅವರು ಜಾತ್ರಾ ದಿನಗಳಂದು ಸಮರ್ಪಕ ವಿದ್ಯುತ್ ಪೂರೈಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT