ಸಿಬಿಐ ವಿಚಾರಣೆ ಎದುರಿಸಿದ ಡಿಕೆಶಿ

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.₹ 74.93 ಕೋಟಿ ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದ ಸಿಬಿಐ, 2020ರ ಅಕ್ಟೋಬರ್ 5ರಂದು ಶಿವಕುಮಾರ್ ಮನೆ ಸೇರಿದಂತೆ ಹಲವೆಡೆ ಶೋಧ ನಡೆಸಿತ್ತು. ನವೆಂಬರ್ ತಿಂಗಳಿನಲ್ಲಿ ಒಮ್ಮೆ ಶಿವಕುಮಾರ್ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು.
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.