ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Last Updated 7 ಸೆಪ್ಟೆಂಬರ್ 2020, 19:52 IST
ಅಕ್ಷರ ಗಾತ್ರ

ಬೆಂಗಳೂರು:ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿರುವ ಒಪ್ಪಿಗೆಯನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಬಂಧಿ ಶಶಿಕುಮಾರ್ ಶಿವಣ್ಣ ಸಲ್ಲಿಸಿರುವ ಮೇಲ್ಮನವಿ ಆಧರಿಸಿ ರಾಜ್ಯ, ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲಂಘನೆ ಆರೋಪದಲ್ಲಿಡಿ.ಕೆ. ಶಿವಕುಮಾರ್ ಮತ್ತು ಇತರರ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿತ್ತು.

‘ಕೇಂದ್ರ ಸರ್ಕಾರಿ ನೌಕರರಾಗಿರುವ ಕಾರಣಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಲು ಆಗುವುದಿಲ್ಲ.ದೆಹಲಿ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ ಪ್ರಕಾರ ಸಿಬಿಐ ತನಿಖೆ ನಡೆಯುತ್ತಿರುವಾಗ ರಾಜ್ಯ ಸರ್ಕಾರ ‘ಸಮ್ಮತಿ’ ಬದಲಿಗೆ ‘ಅನುಮೋದನೆ’ ಎಂಬ ಪದ ಬಳಸಿದೆ. ಅನುಮೋದನೆ ಆಡಳಿತಾತ್ಮಕ ವಿಷಯವಾಗಿದ್ದರೂ ಸರ್ಕಾರ ಇದಕ್ಕೆ ಸಕಾರಣ ತಿಳಿಸಬೇಕಿತ್ತು’ ಎಂದು ಶಶಿಕುಮಾರ್ ಪ್ರತಿಪಾದಿಸಿದ್ದರು. ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT