ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ ತಡೆಯಾಜ್ಞೆ ಇರುವಾಗ ಹೇಗೆ ದಾಳಿ ನಡೆಸುತ್ತಾರೆ: ವಕೀಲ ಪೊನ್ನಣ್ಣ ಪ್ರಶ್ನೆ

ಡಿಕೆಶಿ ಮನೆ, ಕಚೇರಿ ಮೇಲೆ ಸಿಬಿಐ ದಾಳಿ
Last Updated 5 ಅಕ್ಟೋಬರ್ 2020, 5:42 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಸದಾಶಿವನಗರದ ಡಿ.ಕೆ. ಶಿವಕುಮಾರ್‌ ಮನೆ ಸೇರಿದಂತೆ 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ, ರಾಜ್ಯ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಸೇರಿದಂತೆ ಹಲವು ಪ್ರಮುಖರು ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಬಳಿ ದೌಡಾಯಿಸಿದರು.

‘ಸಿಬಿಐ ಅಧಿಕಾರಿಗಳ ದಾಳಿಗೆ ರಾಜ್ಯ ಸರ್ಕಾರ ಅನುಮತಿ ಕೊಡಬೇಕು. ಅದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ ತಡೆಯಾಜ್ಞೆ ಇರುವಾಗ ದಾಳಿ ಹೇಗೆ ನಡೆಸುತ್ತಾರೆ’ ಎಂದು ಡಿ.ಕೆ. ಶಿವಕುಮಾರ್‌ ಪರ ವಕೀಲರೂ ಆಗಿರುವ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್‌. ಪೊನ್ನಣ್ಣ ಹೇಳಿದರು.

‘ಮುಕ್ತವಾದ ತನಿಖೆಗೆ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಅದು ನ್ಯಾಯುಬದ್ಧವಾದ ತನಿಖೆ ನಡೆಸಲಿ. ಇದು ರಾಜಕೀಯ ಪ್ರೇರಿತ’ ಎಂದೂ ದೂರಿದರು

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT