ಭಾನುವಾರ, ಏಪ್ರಿಲ್ 18, 2021
31 °C

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ನಿವಾಸದ ಮೇಲೆ ದೆಹಲಿ ಮೂಲದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿ ಸಂಬಂಧ ಬೇಗ್ ಪತ್ನಿಗೆ ಮಾಹಿತಿ ನೀಡಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಐಎಂಎ ವಂಚನೆ ಪ್ರಕರಣದ ಕುರಿತಾಗಿ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದರು. ಪ್ರಕರಣದ ಆರೋಪಿ‌ ಮನ್ಸೂರ್ ಮಾಡಿದ್ದ ಆರೋಪಗಳ ಸಂಬಂಧ ಸಾಕ್ಷ್ಯಾಧಾರಗಳು ಸಿಕ್ಕಿರುವುದರಿಂದ ಬೇಗ್ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಬೇಗ್ ಅವರಿಗೆ 14ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು