ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಬರುವ ಬಸ್‌ಗಳಲ್ಲಿ ಡ್ರಗ್ ಸರಬರಾಜು: ಶ್ವಾನದಳದಿಂದ ತಪಾಸಣೆ

Last Updated 2 ಸೆಪ್ಟೆಂಬರ್ 2020, 4:33 IST
ಅಕ್ಷರ ಗಾತ್ರ
ADVERTISEMENT
""
""
""

ಬೆಂಗಳೂರು: ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಬಸ್‌ಗಳ ಮೂಲಕ ಬೆಂಗಳೂರಿಗೆ ಡ್ರಗ್ ಸರಬರಾಜು ಮಾಡುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು, ಬುಧವಾರ ಬೆಳಿಗ್ಗೆ ಬಸ್‌ಗಳಲ್ಲಿ ತಪಾಸಣೆ ನಡೆಸಿದರು‌.

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿದ್ದ ಬಸ್‌ಗಳು ಹಾಗೂ ಖಾಸಗಿ ಬಸ್‌ಗಳಲ್ಲಿ ಬಂದ್ ಕೊರಿಯರ್ ಹಾಗೂ ಪಾರ್ಸೆಲ್‌ಗಳನ್ನು ಪೊಲೀಸರು ಪರಿಶೀಲಿಸಿದರು.

ಶ್ವಾನದಳದ ಮೂಲಕವೂ ತಪಾಸಣೆ ಮಾಡಿಸಿದರು. ಸದ್ಯಕ್ಕೆ ಯಾವುದೇ ಪ್ರಕಾರದ ಡ್ರಗ್ ಸಿಕ್ಕಿಲ್ಲ.
ಡ್ರಗ್ ಮಾಫಿಯಾ ಮಟ್ಟಹಾಕಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದರ ಭಾಗವಾಗಿಯೇ ಹಲವೆಡೆ ದಾಳಿಗಳನ್ನೂ ಮಾಡುತ್ತಿದ್ದಾರೆ. ಡ್ರಗ್ ಸರಬರಾಜು ಹಾಗೂ ಮಾರಾಟದ ಮೇಲೆ ಸಿಸಿಬಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT