ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ವಿಚಾರಣೆ ಇಂದು

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.
‘ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ನೀಡುವಂತೆ ಕೋರಿ, ಸಿಸಿಬಿ ಅಧಿಕಾರಿಗಳು ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದು, ಸಿಸಿಬಿ ಕಚೇರಿಗೆ ಗುರುವಾರ (ಜ.28) ಬೆಳಿಗ್ಗೆ ಬರುವಂತೆ ತಿಳಿಸಲಾಗಿದೆ. ತನಿಖಾಧಿಕಾರಿ ಪುನೀತ್ ಕುಮಾರ್ ವಿಚಾರಣೆ ನಡೆಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಡ್ರಗ್ಸ್ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದರು. ಈ ಸಂಬಂಧ ಸಿಸಿಬಿ ಎರಡು ಬಾರಿ ವಿಚಾರಣೆಯೂ ನಡೆಸಿತ್ತು. ಆದರೆ, ಅಗತ್ಯ ಆಧಾರಗಳನ್ನು ಇಂದ್ರಜಿತ್ ನೀಡಿರಲಿಲ್ಲ. ಹಾಗಾಗಿ, ಮತ್ತೊಮ್ಮೆ ಹಾಜರಾಗಲು ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.