ಹುಬ್ಬಳ್ಳಿ: ನಟಿ ರಾಗಿಣಿ ದ್ವಿವೇದಿ ಅವರ ಜೊತೆಗೆ ತೆಗೆಸಿಕೊಂಡಿದ್ದ ಫೋಟೊಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದ, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ ಗದಿಗೆಪ್ಪಗೌಡರ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕಲು ನಗರ ಸಿಸಿಬಿ ಪೊಲೀಸರ ತಂಡ ಗೋವಾಕ್ಕೆ ಹೋಗಿ ಬಂದಿದೆ.
‘ಗೋವಾದ ಕ್ಯಾಸಿನೊ ಒಂದರಲ್ಲಿ ಮಾಹಿತಿಗಾಗಿ ಜಾಲಾಡಿದ್ದಾರೆ. ಏನೂ ದಾಖಲೆಗಳು ಸಿಕ್ಕಿಲ್ಲ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚೆಗೆ ಗದಿಗೆಪ್ಪಗೌಡರ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು, ಕೆಲವು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.