ಮಂಗಳವಾರ, ಜೂನ್ 28, 2022
28 °C

ಸಿ.ಡಿ. ಪ್ರಕರಣ: ಇಂದು ಯುವತಿ ವಿಚಾರಣೆ: ವೈದ್ಯಕೀಯ ಪರೀಕ್ಷೆ ನಡೆಸಿ,‌ ಮಹಜರು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಧೀಶರ ಎದುರು ಹೇಳಿಕೆ ನೀಡಿರುವ ಯುವತಿ, ಇಂದು  ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರಾದ ನಂತರ ಯುವತಿಯ ಧ್ವನಿ ಮಾದರಿ‌ ಸಂಗ್ರಹಿಸಲಾಗಿತ್ತು. ಜೊತೆಗೆ, ಬುಧವಾರ ಬೆಳಿಗ್ಗೆ ವಿಚಾರಣೆಗೆ ಬರುವಂತೆ ಎಸ್ಐಟಿ, ನೋಟಿಸ್ ಸಹ ನೀಡಿತ್ತು. ಅದರನ್ವಯ, ಯುವತಿ ವಿಚಾರಣೆಗೆ ಬರಲಿದ್ದಾರೆ. ತಮ್ಮ ಹೇಳಿಕೆಯನ್ನು ತನಿಖಾಧಿಕಾರಿ ಎದುರು ದಾಖಲಿಸಲಿದ್ದಾರೆ. ಇದಾದ ನಂತರ, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರ, ಯುವತಿ ಸಮೇತ ಅಧಿಕಾರಿಗಳು ಸ್ಥಳ‌ ಮಹಜರು ಮಾಡಲಿದ್ದಾರೆ.

ವಿಚಾರಣೆಗಾಗಿ ಆಡುಗೋಡಿಯಲ್ಲಿರುವ ಸಿಸಿಬಿ ತಾಂತ್ರಿಕ‌ ವಿಭಾಗದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಎಸಿಪಿ ಎಂ.ಸಿ. ಕವಿತಾ ಹಾಗೂ ಇತರರು ಹಾಜರಿರಲಿದ್ದಾರೆ.
  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು