ಸಿಡಿ ಪ್ರಕರಣದ ಯುವತಿ ತಾಯಿ ಆಸ್ಪತ್ರೆಗೆ ದಾಖಲು

ವಿಜಯಪುರ: ಸಿಡಿ ಪ್ರಕರಣದ ಯುವತಿ ತಾಯಿ ಅನಾರೋಗ್ಯ ದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಯುವತಿ ತಾಯಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಆರೋಪ ಪ್ರತ್ಯಾರೋಪದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಧ್ವನಿ ಎತ್ತಿರುವುದು ಸಂತ್ರಸ್ತೆಗಾಗಿಯಲ್ಲ, ಸಿದ್ದರಾಮಯ್ಯಗಾಗಿ: ಬಿಜೆಪಿ
ಷ್ಯಡ್ಯಂತ್ರದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಕೇಳಿ ಬಂದಿದ್ದು, ಹಾಗಾಗಿ ಅವರು ಮೌನವಾಗಿದ್ದಾರೆ. ಆದರೆ ಸಿದ್ಧರಾಮಯ್ಯ ಪದೇ ಪದೇ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇನ್ನೊಂದೆಡೆ ಪೊಲೀಸರು ಸತತವಾಗಿ ಸಿ.ಡಿ. ಸಂತ್ರಸ್ತೆಯ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆರೋಪಿಗೆ ಮಾತ್ರ ವಿಶ್ರಾಂತಿ ಪಡೆಯಲು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.