ಶನಿವಾರ, ಏಪ್ರಿಲ್ 17, 2021
23 °C

ಸಿ.ಡಿ ಪ್ರಕರಣ: ರಕ್ಷಣೆಗೆ ಯುವತಿ ಮೊರೆ, ದೂರು ದಾಖಲಿಸಿದ ಮಹಿಳಾ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯು ರಕ್ಷಣೆ ಕೋರಿ ವಿಡಿಯೊ ಬಿಡುಗಡೆ ಮಾಡುತ್ತಿದ್ದಂತೆ, ರಾಜ್ಯ ಮಹಿಳಾ ಆಯೋಗವು ಶನಿವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

‘ಪ್ರಕರಣದಿಂದ ಮಾನಹಾನಿಯಾಗಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದೇನೆ. ನನಗೆ ರಕ್ಷಣೆ ಒದಗಿಸಬೇಕು’ ಎಂದು ಯುವತಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

‘ಯುವತಿಯು ಭಯಗೊಂಡಿರುವುದು ಮತ್ತು ಆತಂಕದಲ್ಲಿರುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಅವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಗೃಹ ಸಚಿವರು ಮತ್ತು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಈ ಬಗ್ಗೆ ಆಯೋಗದಿಂದ ಪತ್ರ ಬರೆಯಲಾಗುವುದು. ಯುವತಿಗೆ ರಕ್ಷಣೆ ಒದಗಿಸಬೇಕು ಎಂದು ಕೋರಲಾಗುವುದು’ ಎಂದು ಆಯೋಗದ ಅಧ್ಯಕ್ಷ ಪ್ರಮೀಳಾ ನಾಯ್ಡು ‘ಪ್ರಜಾವಾಣಿ’ಗೆ ತಿಳಿಸಿದರು.

‘ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಯುವತಿ ಎದೆಗುಂದಬಾರದು. ಧೈರ್ಯದಿಂದ ಸವಾಲು ಎದುರಿಸಬೇಕು’ ಎಂದೂ ಅವರು ಹೇಳಿದರು.

ಇದನ್ನೂ ಓದಿ... ಸಿ.ಡಿ. ಪ್ರಕರಣ: ಎಫ್‌ಐಆರ್ ದಾಖಲಾದ ಬೆನ್ನಲ್ಲೇ ವಿಡಿಯೊ ಹರಿಬಿಟ್ಟ ಯುವತಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು