ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಎರಡು ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಅನುಮೋದನೆ

Last Updated 29 ಮಾರ್ಚ್ 2022, 17:37 IST
ಅಕ್ಷರ ಗಾತ್ರ

ನವದೆಹಲಿ:ಕರ್ನಾಟಕದಲ್ಲಿ ₹ 890 ಕೋಟಿಗೂ ಹೆಚ್ಚು ವೆಚ್ಚದ ಎರಡು ಪ್ರಮುಖ ರಸ್ತೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ.

ಮಂಗಳೂರು– ತುಮಕೂರು ರಾಷ್ಟ್ರೀಯ ಹೆದ್ದಾರಿ– 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ₹ 718.52 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಎರಡು ಪಥಗಳ ರಸ್ತೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ–173ರ ಹೊಸದುರ್ಗ- ಹೊಳಲ್ಕೆರೆ ಮಾರ್ಗವನ್ನು ₹170.34 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಎರಡು ಲೇನ್‌ ರಸ್ತೆಯನ್ನಾಗಿ ವಿಸ್ತರಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಗಡ್ಕರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT