ಶನಿವಾರ, ಡಿಸೆಂಬರ್ 3, 2022
28 °C

ತಿಪಟೂರು: ಎನ್‌ಎಚ್‌ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಿಪಟೂರು ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

‘ತಿಪಟೂರಿನ ಕೋಡಿ ಸರ್ಕಲ್‌ನಿಂದ ಹುಚ್ಚಗೊಂಡನಹಳ್ಳಿ ಬೈಪಾಸ್ ತನಕ 4 ಲೇನ್ ನಿರ್ಮಾಣ ಮಾಡಲಾಗುವುದು. ₹32.50 ಕೋಟಿ ವೆಚ್ಚದಲ್ಲಿ‌ ರಸ್ತೆ ಅಗಲೀಕರಣ ಮಾಡಲಾಗುವುದು’ ಎಂದು ಬರೆದುಕೊಂಡಿದ್ದಾರೆ. 

206 ಸಂಖ್ಯೆಯ ರಾಷ್ಟ್ರೀಯ ಹೆದ್ದಾರಿಯು ಆಂಧ್ರ ಪ್ರದೇಶದ ಚಿತ್ತೂರಿನಿಂದ ತುಮಕೂರು ಜಿಲ್ಲೆಯ ತಿಪಟೂರು, ಶಿರಾ, ಕಡೂರು, ಶಿವಮೊಗ್ಗ, ಶಿರಸಿ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಸಂಪರ್ಕಿಸುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು