ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, ಕಿತ್ತೂರು, ತೇಗೂರು, ಮಮ್ಮಿಗಟ್ಟಿ, ಕ್ಯಾರಕೊಪ್ಪ ಮೂಲಕ ಧಾರವಾಡ ನಿಲ್ದಾಣವನ್ನು ಈ ಮಾರ್ಗ ಹೊಂದಿದೆ’ ಎಂದು ಮಾಹಿತಿ ನೀಡಿದರು.