ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಸಂಗ್ರಹಿಸಿಡಲು ಟ್ಯಾಂಕರ್‌ಗಳು ಇಲ್ಲದ ಕಾರಣ, ತಕ್ಷಣವೇ 10 ಟ್ಯಾಂಕರ್‌ಗಳ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಲ್ಲದೆ, ಬಹ್ರೈನ್ ಮತ್ತು ಇತರ ದೇಶಗಳಿಂದ ಕರ್ನಾಟಕ ಬಂದರಿಗೆ ಬಂದಿರುವ ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ಇಲ್ಲಿಯೇ ಬಳಸಿಕೊಳ್ಳಲು ಒಪ್ಪಿಗೆ ನೀಡಬೇಕು ಮತ್ತು ಆಮ್ಲಜನಕದ ಕೋಟಾವನ್ನು ಹೆಚ್ಚಿಸಬೇಕು. ದೂರದ ರಾಜ್ಯಗಳಿಂದ ತರಿಸುವುದು ಕಷ್ಟವಾಗುತ್ತಿದೆ ಎಂಬುದನ್ನು ಅವರ ಗಮನಕ್ಕೆ ತರಲಾಯಿತು. ಇದಕ್ಕಾಗಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಎಲ್ಲರೂ ಒಗ್ಗಟ್ಟಿನಿಂದ ಹಿಮ್ಮೆಟ್ಟಿಸಲು ಕ್ರಮ ತೆಗೆದುಕೊಳ್ಳಬೇಕು. ಕೇಂದ್ರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದೆವು. ಅದಕ್ಕೆ ಸಮಾಧಾನ ವ್ಯಕ್ತಪಡಿಸಿದರು ಎಂದು ಬೊಮ್ಮಾಯಿ ಹೇಳಿದರು.

ಯಾವುದೇ ರೀತಿಯ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಇಡೀ ದೇಶದಲ್ಲೇ ಪ್ರಕರಣಗಳು ಹೆಚ್ಚಾಗಿವೆ. ಎಲ್ಲರೂ ಕೂಡಿ ನಿಯಂತ್ರಣಕ್ಕೆ ತರಬೇಕು ಎಂದು ಸಲಹೆ ನೀಡಿದರು.

ರಾಜಕೀಯ ಉದ್ದೇಶವಿಲ್ಲ:

ಈ ಭೇಟಿಯಲ್ಲಿ ರಾಜಕೀಯ ಉದ್ದೇಶವಿರಲಿಲ್ಲ. ಕೋವಿಡ್ ಬಿಟ್ಟು ಬೇರೆ ಯಾವುದೇ ವಿಷಯಗಳು ಪ್ರಸ್ತಾಪಕ್ಕೆ ಬರಲಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಂಗಾಂಗ ಕಸಿಗೆ ಒಳಗಾದವರಿಗೆ ಲಸಿಕೆ ಪಡೆದ ಬಳಿಕವೂ ಕೋವಿಡ್ನಿಂದ ಅಪಾಯವಿದೆ: ಅಧ್ಯಯನ

ಬಸವರಾಜ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ ಎಂಬ ವದಂತಿ ಹರಡಿರುವ ಕುರಿತು ಪ್ರಶ್ನಿಸಿದಾಗ, ಆ ರೀತಿ ಯೋಚನೆ ಮಾಡುವುದೇ ತಪ್ಪು. ಸರ್ಕಾರದ ಮೊದಲ ಆದ್ಯತೆ ಕೋವಿಡ್ ನಿಯಂತ್ರಣಕ್ಕೆ ತರುವುದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಹಸಿ ಸುಳ್ಳು ಎಂದರು.

ಆಕ್ಸಿಜನ್ ಎಕ್ಸ್ಪ್ರೆಸ್: ರಾಜ್ಯಕ್ಕೆ 6 ಕಂಟೇನರ್ ಆಮ್ಲಜನಕ: ಪಿಯೂಷ್ ಗೋಯಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.