ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ ಘಟನೆ| ತ‍ಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ

Last Updated 12 ಆಗಸ್ಟ್ 2020, 11:06 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್‌ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ ಕೃತ್ಯಗಳು’ ಎಂದರು.

‘ಸರ್ಕಾರದ ಹೆಸರು ಹಾಳು ಮಾಡುವ ದುರುದ್ದೇಶದಿಂದ ಇಂತಹ ಸಂಚುಗಳನ್ನು ಮಾಡಲಾಗುತ್ತಿದೆ. ಗಲಾಟೆ ಹಿಂದೆ ಕೆಲ ವ್ಯಕ್ತಿಗಳು ವ್ಯವಸ್ಥಿತ ಸಂಚು ರೂಪಿಸಿದ್ದಾರೆ. ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಬಾರದು. ಘಟನೆಯ ವರದಿ ಮಾಡಲು ಹೋಗಿದ್ದ ಪತ್ರಕರ್ತರ ಮೇಲೂ ಹಲ್ಲೆ ನಡೆಸಿರುವುದು ಖಂಡನೀಯ’ ಎಂದು ಹೇಳಿದರು.

‘ಕಿಡಿಗೇಡಿಗಳಿಂದ ಅಮಾಯಕರು ಬಲಿ ಆಗಬಾರದು ಎಂದರೆ ಕಠಿಣ ಕ್ರಮ ಕೈಗೊಳ್ಳಲೇಬೇಕು. ಅಗತ್ಯ ಬಿದ್ದರೆ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದರು.

‘ದೇಶದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಧಾನಿ ನರೇಂದಿ ಮೋದಿ ಶ್ರಮಿಸತ್ತಿದ್ದಾರೆ. ಇದನ್ನು ಸಹಿಸದ ದೇಶದ್ರೋಹಿಗಳ ಷಡ್ಯಂತ್ರದಿಂದ ಇಂತಹ ಗಲಾಟೆಗಳು ನಡೆಯುತ್ತಿವೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರೂ ಶಾಂತಿ ಕಾಪಾಡಬೇಕು’ ಎಂದರು.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT