ಭಾನುವಾರ, ಮಾರ್ಚ್ 7, 2021
32 °C

ಕೇಂದ್ರದಿಂದ ಕನ್ನಡಕ್ಕೆ ಅಗೌರವ: ಎಚ್‌.ಡಿ. ಕುಮಾರಸ್ವಾಮಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಶನಿವಾರ ನಡೆದ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕದ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ಸಮಾರಂಭದಲ್ಲಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಅಡಿಗಲ್ಲು ಫಲಕಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿವೆ. ಕನ್ನಡವನ್ನು ಕಡೆಗಣಿಸಿರುವುದು ನಿಚ್ಚಳವಾಗಿ ಕಾಣುತ್ತಿದೆ. ಅಮಿತ್‌ ಶಾ ಅವರ ಧೋರಣೆ ಕನ್ನಡ ವಿರೋಧಿಯಾದುದು ಮತ್ತು ಕನ್ನಡಿಗರಿಗೆ ಮಾಡಿದ ಅವಮಾನ’ ಎಂದು ದೂರಿದ್ದಾರೆ.

ದೇಶವು ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯದ ಭಾಷೆಗೆ ಗೌರವ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಾಡು, ನುಡಿಯ ಘನತೆಗೆ ಚ್ಯುತಿ ಬಂದಾಗಲೂ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ನಡೆಯೂ ನಾಡಿಗೆ ಬಗೆದ ದ್ರೋಹ ಎಂದು ಟೀಕಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು