ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಕೌನ್ಸೆಲಿಂಗ್‌: ಜನವರಿ 15ರವರೆಗೆ ಕಾಲಾವಕಾಶ

Last Updated 31 ಡಿಸೆಂಬರ್ 2020, 20:01 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರವರೆಗೆ ಕಾಲಾವಕಾಶ ವಿಸ್ತರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅನುಮತಿ ನೀಡಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

‘ಹೀಗಾಗಿ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು. ಕೌನ್ಸೆಲಿಂಗ್ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶೀಘ್ರವೇ ಪ್ರಕಟಿಸಲಿದೆ’ ಎಂದೂ ಅವರು ಹೇಳಿದ್ದಾರೆ.

‘ಇದರಿಂದ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದಿರುವವರಿಗೆ ಕೋರ್ಸ್ ಇಷ್ಟವಿಲ್ಲದಿದ್ದರೆ ಸೀಟುಗಳನ್ನು ವಾಪಸು ಮಾಡಲು ಕೊನೆಯ ಬಾರಿಗೆ ಅವಕಾಶ ನೀಡಲಾಗುತ್ತದೆ. ಆದರೆ, ಮುಂದೆ ನಡೆಯಲಿರುವ ಮಾಪ್-ಅಪ್ ಸುತ್ತಿನಲ್ಲಿ ಸೀಟು ಪಡೆದವರಿಗೆ ಅದನ್ನು ಹಿಂದಿರುಗಿಸಲು ಖಂಡಿತಾ ಅವಕಾಶ ಇರುವುದಿಲ್ಲ. ಅವರು ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಲೇಬೇಕಾಗುತ್ತದೆ. ಇಲ್ಲದಿದ್ದರೆ ನಿಗದಿತ ಶುಲ್ಕದ ಐದು ಪಟ್ಟು ಮೊತ್ತ ದಂಡವಾಗಿ ಪಾವತಿಸಬೇಕಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸದಿದ್ದಾರೆ.

ಈ ಹಿಂದೆ ನೀಡಿದ್ದ ಅನುಮತಿ ಪ್ರಕಾರ ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಡಿ. 31 ಕೊನೆಯ ದಿನ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT