ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಫಲಿತಾಂಶ: ಜುಲೈ 30ರಂದು ಪ್ರಕಟ

Last Updated 25 ಜುಲೈ 2022, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಎಂಜಿನಿಯರಿಂಗ್‌ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜೂನ್‌ 16 ಮತ್ತು 17ರಂದು ಸಿಇಟಿ, 18ರಂದು ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯನ್ನು ನಡೆಸಿತ್ತು.

‘ಸಿಇಟಿ ನಡೆಸುವಾಗ ಸಿಬಿಎಸ್‌ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು. ಅವರ ಫಲಿತಾಂಶ ಈಗ ಬಂದಿದೆ. ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಮ್ಮ ಅಂಕಗಳನ್ನು ಮಂಗಳವಾರ (ಜುಲೈ 26) ಸಂಜೆಯ ಒಳಗೆ ಅಪ್ಲೋಡ್ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT