ಬುಧವಾರ, ಸೆಪ್ಟೆಂಬರ್ 22, 2021
24 °C

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಸಿ.ಎನ್. ಅಶ್ವತ್ಥ ನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇದೇ 20ರಂದು ಪ್ರಕಟವಾಗಲಿದೆ. 

‘ಅ.1ರವರೆಗೆ ವೃತ್ತಿಪರ ಕೋರ್ಸ್‌ ಪದವಿ ಪ್ರವೇಶಕ್ಕೆ ಅವಕಾಶವಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳ  ಶುಲ್ಕದ ಬಗ್ಗೆ ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದರು.

‘ಫಲಿತಾಂಶ ಪ್ರಕಟವಾದ ನಂತರ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್‌ ನಡೆಸಲಾಗುವುದು. ಶೈಕ್ಷಣಿಕ ವರ್ಷ ಆರಂಭ ಹೆಚ್ಚು ವಿಳಂಬವಾಗಲು ಬಿಡುವುದಿಲ್ಲ’ ಎಂದೂ ಹೇಳಿದರು. 

‘ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ಈ ಬಗ್ಗೆ ದೂರುಗಳು ಬಂದರೆ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದೂ ಅವರು ಎಚ್ಚರಿಸಿದರು. 

ಫಲಿತಾಂಶಕ್ಕಾಗಿ https://cetonline.karnataka.gov.in ವೆಬ್‌ಸೈಟ್‌ ಸಂಪರ್ಕಿಸಬಹುದು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು