ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ದಿನದಲ್ಲಿ ಸಿಇಟಿ ಫಲಿತಾಂಶ– ಸಚಿವ ಅಶ್ವತ್ಥನಾರಾಯಣ

Last Updated 28 ಆಗಸ್ಟ್ 2021, 8:20 IST
ಅಕ್ಷರ ಗಾತ್ರ

ಬೆಂಗಳೂರು: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಸೂತ್ರವಾಗಿ ನಡೆಯುತ್ತಿದ್ದು, 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಅಕ್ಟೋಬರ್‌ನಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಪರೀಕ್ಷೆ ನಡೆಯುತ್ತಿದ್ದ ಶೇಷಾದ್ರಿಪುರಂ ಕಾಲೇಜಿನ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ 30ಕ್ಕೆ ಪರೀಕ್ಷೆ ಮುಗಿಯಲಿದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ಫಲಿತಾಂಶ ನೀಡಲು ಕ್ರಮ ವಹಿಸಲಾಗಿದೆ’ ಎಂದರು.

‘ಬೆಂಗಳೂರಿನ 86 ಕೇಂದ್ರಗಳೂ ಸೇರಿ ರಾಜ್ಯದ 530 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಗೆ 2,01,816 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಕೇರಳದ ಗಡಿ ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಇದ್ದರೂ ಆ ಜಿಲ್ಲೆಗಳಲ್ಲೂ ತೊಂದರೆ ಉಂಟಾಗಿಲ್ಲ. ಮುಖ್ಯವಾಗಿ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಪರೀಕ್ಷೆ ಸುಗಮವಾಗಿ ಸಾಗಿದೆ’ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT