ಶನಿವಾರ, ನವೆಂಬರ್ 26, 2022
22 °C

ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್‌ ಇಂದು ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈಕೋರ್ಟ್ ಆದೇಶದಂತೆ ಸಿದ್ಧಪಡಿಸಿದ ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಪಟ್ಟಿಯನ್ನು ಅ. 1ರ ಮಧ್ಯಾಹ್ನ 2ಕ್ಕೆ ಪ್ರಕಟಿಸ
ಲಾಗುತ್ತಿದೆ.

ಹಿಂದಿನ ವರ್ಷ ಪಿಯು ತೇರ್ಗಡೆಯಾಗಿದ್ದು, ಈ ಬಾರಿಯೂ ಸಿಇಟಿ ಬರೆದ 24 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳ ದ್ವಿತೀಯ ಪಿಯು ಅಂಕಗಳಲ್ಲಿ 6 ಅಂಕಗಳನ್ನು ಕಡಿತಗೊಳಿಸಿ, ಉಳಿದ ಶೇ 50ರಷ್ಟು, ಈ ಬಾರಿಯ ಸಿಇಟಿಯ ಶೇ 50ರಷ್ಟು ಅಂಕಗಳನ್ನು ಸೇರಿಸಿ ಹೊಸ ಪರಿಷ್ಕೃತ ರ್‍ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲಾಗಿದೆ. ಇದರಿಂದ ಈ ಹಿಂದೆ ಪ್ರಕಟಿಸಿದ ಪಟ್ಟಿಯಲ್ಲಿ ಒಂದಷ್ಟು ವ್ಯತ್ಯಾಸಗಳಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ. 

ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟ್ karresults.nic.inನಲ್ಲಿ ನೋಡಬಹುದು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು