ಬೆಂಗಳೂರು:ದಲಿತರಿಗೆ ಇಷ್ಟೊಂದು ಸ್ಥಾನ ಕೊಟ್ಟಿರುವುದು ದಾರಿ ತಪ್ಪಿಸುವ ಕೆಲಸ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ. ಪ್ರಾಯಶಃ ಇಷ್ಟು ವರ್ಷ ಕಾಂಗ್ರೆಸ್‌ನವರು ದಲಿತರನ್ನು ದಾರಿ ತಪ್ಪಿಸಿದ್ದು ನೆನಪಾಗಿ ಹೇಳಿರಬೇಕು. ದಲಿತರಿಗೆ ಹೆಚ್ಚು ಸ್ಥಾನ ನೀಡಿದ ಬಗ್ಗೆ ಅವರು ಪ್ರಧಾನಿ ಮೋದಿಯನ್ನು ಅಭಿನಂದಿಸಬೇಕಿತ್ತು. ಈ ಬೆಳವಣಿಗೆಯಿಂದ ಕಾಂಗ್ರೆಸಿಗರು ವಿಚಲಿತರಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಶುಕ್ರವಾರ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿದರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್‌ಕೇಂದ್ರ ಮಂತ್ರಿಮಂಡಲದ ವಿಸ್ತರಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಧಾನಿಯವರು ದಲಿತರು, ಹಿಂದುಳಿದವರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ಕೋವಿಡ್ ಮೂರನೇ ಅಲೆಯನ್ನು ತಡೆಯಲು ₹23,123 ಕೋಟಿ ನೀಡಲಾಗಿದೆ. ಅಲ್ಲದೆ, ಕೃಷಿ ಮತ್ತು ಇತರ ಪೂರಕ ಕ್ಷೇತ್ರಗಳಿಗೆ ಪುನಃ ₹1 ಲಕ್ಷ ಕೋಟಿಯನ್ನು ಕೇಂದ್ರ ಸರ್ಕಾರ ನೀಡಿದೆ. ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಅಭಿವೃದ್ಧಿಗೆ ಇದು ಬಳಕೆಯಾಗುತ್ತದೆ. ಇವನ್ನೆಲ್ಲ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಣ್ಣು ಬಿಟ್ಟು ನೋಡಲಿ ಎಂದು ಅವರು ವ್ಯಂಗ್ಯವಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.