ಶನಿವಾರ, ಮೇ 8, 2021
26 °C

ಮೈಸೂರಿನಿಂದ ಆಕ್ಸಿಜನ್ ಸರಬರಾಜಾಗದೆ ದುರಂತ: ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಸರಬರಾಜಾಗದೆ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ನಮಗೆಲ್ಲ ತಿಳಿದಂತೆ ಮೈಸೂರಿನಲ್ಲಿ ಸಾಕಷ್ಟು ಆಕ್ಸಿಜನ್ ಸಿಲಿಂಡರ್‌ಗಳ ಶೇಖರಣೆ ಇದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪರಿಣಾಮ ಹೆಚ್ಚಿದೆ ಎಂಬ ಕಾರಣಕ್ಕೆ ಒಳ್ಳೆಯ ಉದ್ದೇಶದಿಂದಲೇ ಅವರು ಅಮ್ಲಜನಕ ಹೆಚ್ಚಾಗಿ ಇಟ್ಟುಕೊಂಡಿರಬಹುದು. ಆದರೆ. ಮೈಸೂರಿನಿಂದ ಕೊಡಗು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿಂದಲೇ ಆಗಬೇಕು. ಇದರಲ್ಲಿ ಯಾವುದೇ ವ್ಯತ್ಯಯ ಆಗಬಾರದು ಎಂದು ಅವರು ಹೇಳಿದ್ದಾರೆ.

ಇದೇವೇಳೆ, ಮೈಸೂರಿನಲ್ಲಿ ನಿಷ್ಕ್ರಿಯವಾಗಿರುವ ಆಕ್ಸಿಜನ್ ಪ್ಲಾಂಟ್ ಇದೆ. ಅದನ್ನು ನಮಗೆ ನೀಡಿ, ನಾವೇ ನಿರ್ವಹಣೆ ಮಾಡಿಕೊಳ್ಳುತ್ತೇವೆ ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ಧಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು