ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ದುರಂತ: ವರದಿ ಸಲ್ಲಿಕೆ

Last Updated 12 ಮೇ 2021, 6:33 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ಮೃತಪಟ್ಟ ಘಟನೆ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವನಾರಾಯಣ ಮತ್ತು ನಿವೃತ್ತ ಡಿಜಿಪಿ ಎಸ್‌.ಟಿ. ರಮೇಶ್ ಅವರನ್ನು ಒಳಗೊಂಡ ಸಮಿತಿಯು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿತು. ವರದಿ ಸಂಬಂಧ ನ್ಯಾಯ ಪೀಠವು ಬುಧವಾರ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಇದೇ ವಿಷಯದ ಬಗ್ಗೆ ಹಿರಿಯ ಐಎಎಸ್‌ ಅಧಿಕಾರಿ ಶಿವಯೋಗಿ ಸಿ. ಕಳಸದ ಅವರ ನಡೆಸುತ್ತಿರುವ ವಿಚಾರಣೆ ಆಧರಿಸಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಪೀಠಕ್ಕೆ ಅಡ್ವೊಕೇಟ್ ಜನರಲ್ ಭರವಸೆ ನೀಡಿದರು.

ಪೀಠವು ವಿಚಾರಣೆ ಕೈಗೆತ್ತಿಕೊಳ್ಳುವ ಬಗ್ಗೆ ಸೂಚನೆ ನೀಡಿದ ಬಳಿಕ ತನಿಖಾ ಆಯೋಗ ರಚಿಸುವ ನಿರ್ಧಾರ ಪ್ರಕಟಿಸಿದ ಸರ್ಕಾರದ ಕ್ರಮದ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು. ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಕೆಎಸ್‌ಎಲ್‌ಎಸ್‌ಎ ಸಮಿತಿಗೆ ಪೀಠ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT