ಸೋಮವಾರ, ಜೂನ್ 27, 2022
26 °C

ಚಾಮರಾಜನಗರ: ಆಯೋಗದ ವರದಿ ಪಡೆದು ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡುವ ಸಂಬಂಧ ವಿಚಾರಣಾ ಆಯೋಗದ ವರದಿ ಪಡೆದು ಮುಂದುವರಿಯಲಾಗುವುದು’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

‘ರಾಜ್ಯ ಸರ್ಕಾರ ನೇಮಿಸಿದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರ ಏಕಸದಸ್ಯ ಆಯೋಗ ವಿಚಾರಣೆ ನಡೆಸುತ್ತಿದೆ. ಸತ್ಯಾಂಶ ಹೊರಬಿದ್ದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ತಿಳಿಸಿದರು.

‘ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ನೀಡಿದ್ದ ವರದಿಯಲ್ಲಿ ಕೆಲ ಲೋಪಗಳಿವೆ. ಆದರೂ, ಪೀಠದ ಅಭಿಪ್ರಾಯ ಮತ್ತು ಮಾನವೀಯ ನೆಲೆಯಲ್ಲಿ ₹2 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿತು’ ಎಂದು ಅವರು ಪ್ರತಿಪಾದಿಸಿದರು.

‘ಸಮಿತಿಯ ತನಿಖೆ ಬಗ್ಗೆ ಆಕ್ಷೇಪ ಇದ್ದರೆ ತಿಳಿಸಬಹುದು’ ಎಂದು ಮುಖ್ಯನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ತಿಳಿಸಿತು. ಸರ್ಕಾರ ರಚಿಸಿರುವ ವಿಚಾರಣಾ ಆಯೋಗದ ವರದಿ ಬಂದ ಬಳಿಕವೇ ಪೀಠದ ಮುಂದೆ ರಾಜ್ಯದ ಸರ್ಕಾರದ ನಿಲುವನ್ನು ತಿಳಿಸುವುದಾಗಿ ಅಡ್ವೋಕೇಟ್ ಜನರಲ್ ಹೇಳಿದರು.

ಪೀಠವು ಈ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು