ಭಾನುವಾರ, ಜುಲೈ 3, 2022
27 °C

ಹಿಂದಿ ಕುರಿತ ಹೇಳಿಕೆ ವಾಪಸ್‌ ಪಡೆಯಿರಿ: ದೊಡ್ಡರಂಗೇಗೌಡರಿಗೆ ಚಂದ್ರು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಜ್ಜಂಪುರ (ಚಿಕ್ಕಮಗಳೂರು): ‘ಹಿಂದಿ ಹೇರಿಕೆ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಕನ್ನಡದ ವೇದಿಕೆ ಯಲ್ಲಿಯೇ ನಿಂತು ಹಿಂದಿಯನ್ನು ತಬ್ಬಿಕೊಳ್ಳಬೇಕು ಎಂದು ಹೇಳಿಕೆ ನೀಡಿರುವ ಸಾಹಿತಿ ದೊಡ್ಡ ರಂಗೇಗೌಡ ಅವರ ಧೋರಣೆ ಪ್ರಶ್ನಾರ್ಹ. ಕೂಡಲೇ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಿಸಿದರು.

ಬುಕ್ಕಾಂಬುಧಿಯಲ್ಲಿ ಸೋಮ ವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಬಾರಿಯ ದೆಹಲಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ಸ್ತಬ್ಧಚಿತ್ರವನ್ನು ಸಿದ್ಧಗೊಳಿಸಲಾಗಿದೆ. ಅದರಲ್ಲಿ ಹಿಂದಿ ಬರವಣಿಗೆ ಮಾತ್ರವಿದ್ದು, ಕನ್ನಡವನ್ನು ಕಡೆಗಣಿಸಲಾಗಿದೆ. ಆಗಿರುವ ತಪ್ಪನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು