ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಮ್ಮನ್ನು ಅಗಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದು, ಅಧಿಕೃತವಾಗಿ ಮಠದಿಂದ ಈ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ.
ಶ್ರೀಗಳು ಇನ್ನೂ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿದ್ದು, ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳ ಅಗಲಿಕೆಯ ಸುದ್ದಿಗಳು ಪ್ರಸಾರವಾಗುತ್ತಿದ್ದು, ಇದುವರೆಗೆ ಮಠದಿಂದ ಅಧಿಕೃತವಾಗಿ ಮಾಹಿತಿ ನೀಡಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.