ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ: ಕೆಎಸ್‌ಆರ್‌ಟಿಸಿ ಚಾಲಕನಿಗೆ ಜಾಮೀನು ನಿರಾಕರಣೆ

Last Updated 25 ಜನವರಿ 2022, 15:31 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್‌ಆರ್‌ಟಿಸಿ) ಸಂಚಾರಿ ನಿರೀಕ್ಷಕ ಹುದ್ದೆ ಕೊಡಿಸುವುದಾಗಿ ನಂಬಿಸಿ ಅರಗಿಶೆಟ್ಟಿ ಎಂಬುವರಿಂದ ₹ 11 ಲಕ್ಷ ಲಂಚ ಪಡೆದು ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಂಜುನಾಥ ಬಿಲ್ಲಾ ನಾಯಕ್‌ಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಜಾಮೀನು ಕೋರಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಕೂಗಲಿ ತಾಂಡಾದ ನಿವಾಸಿ ಮಂಜುನಾಥ್ ಬಿಲ್ಲಾ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

’ಅರ್ಜಿದಾರರ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿವೆ. ದೂರುದಾರ ಅರಗಿಶೆಟ್ಟಿಗೆ ಮಾತ್ರವಲ್ಲದೇ ಅನೇಕರಿಗೆ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಲಂಚ ಪಡೆದು ವಂಚಿಸಿರುವ ಆರೋಪ ಅರ್ಜಿದಾರನ ಮೇಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಆರೋಪಿಯು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಹಾಗೂ ಸಾಕ್ಷ್ಯಾಧಾರ ನಾಶಪಡಿಸುವ ಸಾಧ್ಯತೆಯಿದೆ‘ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಜಾಮೀನು ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT