ಧಾರವಾಡ: ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಬುಧವಾರ ಮತ್ತಷ್ಟುಏರುಪೇರು ಉಂಟಾಗಿದೆ.

ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆ ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಣವಿ ಅವರಿಗೆ ನೀಡು
ತ್ತಿರುವ ವೈದ್ಯಕೀಯ ಆಮ್ಲಜನಕದ ಪ್ರಮಾಣ ಮತ್ತಷ್ಟು ಹೆಚ್ಚಿಸಿರುವುದಾಗಿ ಹೇಳಿದೆ.

ಜ್ವರದಿಂದ ಬಳಲುತ್ತಿದ್ದ ಕಣವಿ ಅವರನ್ನು ಜ.14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್ ಇರು
ವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8
ಲೀಟರ್ ಆಮ್ಲಜನಕವನ್ನು ನೀಡಲಾಗಿದೆ.

‘ಕಣವಿ ಅವರು ದಾಖಲಾದ ದಿನವೇ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮ ವಹಿಸಲಾಗಿದೆ. ಇದನ್ನು ಆಸ್ಪತ್ರೆ ಹಾಗೂ ಅವರ ಕುಟುಂಬದ ಸದಸ್ಯರಿಗೂ ತಿಳಿಸಲಾಗಿದೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.