ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಸಂಘಗಳಿಗೆ ಮುಖ್ಯ ನ್ಯಾಯಮೂರ್ತಿ ಮನವಿ

Last Updated 5 ಫೆಬ್ರುವರಿ 2021, 18:56 IST
ಅಕ್ಷರ ಗಾತ್ರ

ಬೆಂಗಳೂರು: ಸಣ್ಣ ಪುಟ್ಟ ಕಾರಣಗಳಿಗೆ ನ್ಯಾಯಾಲಯದ ಕಾಲಪಗಳನ್ನು ಬಹಿಷ್ಕರಿಸಬಾರದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ರಾಜ್ಯ ವಕೀಲರ ಸಂಘಗಳಿಗೆ ಮನವಿ ಮಾಡಿದ್ದಾರೆ.

ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳ ವಕೀಲರ ಸಂಘಗಳು ಈ ರೀತಿಯ ನಿರ್ಣಯಗಳನ್ನು ಅಂಗೀಕರಿಸಿವೆ ಎಂಬ ವರದಿಗಳನ್ನು ಆಧರಿಸಿ ಅವರು ಈ ಮನವಿ ಮಾಡಿದ್ದಾರೆ.

‘ನ್ಯಾಯಾಲಯದ ಕೆಲಸದಿಂದ ದೂರ ಇರುವುದು ಅಥವಾ ವಿಚಾರಣೆ ಬಹಿಷ್ಕರಿಸುವುದು ನ್ಯಾಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗಲಿದೆ. ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳು ಕಾರ್ಯನಿರ್ವಹಿಸಲು ಆರಂಭಿಸಿವೆ. ಕಲಾಪ ಬಹಿಷ್ಕರಿಸುವ ಈ ಬೆಳವಣಿಗೆಗಳು ದಾವೆ ಹೂಡುವವರು ಮತ್ತು ಸಂಘದ ಸದಸ್ಯರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT