ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: 17ರಂದು ಡಿಸಿ, ಸಿಇಒಗಳ ಜೊತೆ ಮುಖ್ಯಮಂತ್ರಿ ಸಂವಾದ

Last Updated 15 ಮೇ 2021, 10:22 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿನ ಕೋವಿಡ್‌ ಪರಿಸ್ಥಿತಿ ಅವಲೋಕಿಸಲು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಶಸ್ತ್ರಚಿಕಿತ್ಸಕರ ಜೊತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ (ಮೇ 17) ವಿಡಿಯೊ ಸಂವಾದ ನಡೆಸಲಿದ್ದಾರೆ.

ಅಂದು ಸಂಜೆ 4.30ಕ್ಕೆ ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಈ ಸಂವಾದ ನಡೆಯಲಿದೆ. ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ಉಪ ಉಖ್ಯಮಂತ್ರಿಗಳು, ಸಚಿವರು ಮತ್ತು ಕಾರ್ಯದರ್ಶಿಗಳು ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದರೆ ಅಲ್ಲಿಂದಲೇ ಈ ಸಂವಾದದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಚಿವಾಲಯ ಸೂಚಿಸಿದೆ.

ಜಿಲ್ಲೆಗಳಲ್ಲಿ ಕೋವಿಡ್‌ ಸ್ಥಿತಿ, ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳು, ಲಾಕ್‌ಡೌನ್‌ ಪರಿಣಾಮಗಳ ಬಗ್ಗೆ ಜಿಲ್ಲೆಗಳ ಹಿರಿಯ ಅಧಿಕಾರಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ, ಕೆಲವು ಸಲಹೆಗಳನ್ನೂ ನೀಡಲಿದ್ದಾರೆ. ಹೀಗಾಗಿ, ಎಲ್ಲ ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗುವಂತೆ ಸಚಿವಾಲಯ ತಿಳಿಸಿದೆ.

ರಾಜ್ಯ ಕೋವಿಡ್‌ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್‌. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೂಡಾ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT