ಕೋವಿಡ್‌ನಿಂದ ಗುಣಮುಖರಾದ ಮುಖ್ಯಮಂತ್ರಿ ಯಡಿಯೂರಪ್ಪ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಸಿಎಂ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಹೀಗಾಗಿ, ಮಣಿಪಾಲ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಂಜೆಯೇ ಸಚಿವರ ಸಭೆ ಕರೆದು ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಡಿಸ್ಟಾರ್ಜ್ ಬಳಿಕ ಹೇಳಿದ್ದಾರೆ.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
ಬೆಳಗಾವಿ ಲೋಕಸಭಾ ಮತ್ತು ಇನ್ನೆರಡು ವಿಧಾನಸಭಾ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದಾಗಲೆ ತೀವ್ರ ಜ್ವರದಿಂದ ಬಳಲಿದ್ದ ಅವರು, ಕಳೆದ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಈ ಹಿಂದೆ, ಲಾಕ್‌ಡೌನ್ ಸಂದರ್ಭದಲ್ಲೂ ಕೋವಿಡ್ ಸೋಂಕಿಗೆ ಒಳಗಾಗಿ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡನೇ ಬಾರಿ ಅವರಿಗೆ ಸೋಂಕು ತಗುಲಿತ್ತು.
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.