ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ನೈಟ್ ಕರ್ಫ್ಯೂ,ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್: ಬೊಮ್ಮಾಯಿ

Last Updated 6 ಆಗಸ್ಟ್ 2021, 9:59 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಮತ್ತೆ ಏರಿಕೆಯಾಗಿರುವುದರಿಂದ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ವಿಧಿಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದಿನಿಂದಲೇ ರಾಜ್ಯದಾದ್ಯಂತ ಈಗಿರುವ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚಿರುವ ಮಹಾರಾಷ್ಟ್ರ ಮತ್ತು ಕೇರಳದ ಗಡಿಜಿಲ್ಲೆಗಳಲ್ಲಿವೀಕೆಂಡ್ ಲಾಕ್‌ಡೌನ್ ಜಾರಿಗೆ ಬರಲಿದೆ.

ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು,' ಶುಕ್ರವಾರದಿಂದಲೇ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಯಾಗಲಿದೆ' ಎಂದರು.

ರಾತ್ರಿ ಕರ್ಫ್ಯೂ ಅವಧಿ ಪರಿಷ್ಕರಿಸಲಾಗಿದೆ. ರಾಜ್ಯದಾದ್ಯಂತ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT