ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Last Updated 17 ಏಪ್ರಿಲ್ 2022, 6:13 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಇದನ್ನು ಕಾನೂನು ಸುವ್ಯವಸ್ಥೆಯ ಘಟನೆ ಎಂದು ನೋಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ಇಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವುದಕ್ಕೆ ಬಂದಿದ್ದ ಅವರು,ವಾಟ್ಸ್‌ಆ್ಯಪ್‌ ಪೋಸ್ಟ್‌ ವಿಚಾರವಾಗಿ ಪೊಲೀಸರು ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಿದ್ದಾರೆ. ಪ್ರಚೋದನಕಾರಿಯಾಗಿ ಪೊಲೀಸ್‌ ಠಾಣೆ ಎದುರು ಬಂದು ಗಲಾಟೆ ಮಾಡಿ, ಪೊಲೀಸರಿಗೂ ಏಟು ಬೀಳುವ ರೀತಿಯಲ್ಲಿ ನಡೆದುಕೊಳ್ಳಲಾಗಿದೆ. ಹಳೆ ಹುಬ್ಬಳ್ಳಿಯ ವಿವಿಧ ಭಾಗಗಳಲ್ಲಿ ಕಲ್ಲು ತೂರಾಟ ನಡೆಸಿದ್ದು ತೀವ್ರ ಅಕ್ಷಮ್ಯ ಎಂದು ಸುದ್ದಿಗಾರರಿಗೆ ಹೇಳಿದರು.

ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದರೂ ಕೂಡ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುವುದಿಲ್ಲ. ಈ ಘಟನೆ, ಪ್ರಚೋದನೆ ಹಿಂದೆ ಇರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಈ ತರಹದ ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳುವ ಸಾಹಸ ಮಾಡಬಾರದು. ಅದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ. ದೊಡ್ಡ ಪ್ರಮಾಣದಲ್ಲಿ ಜನ ಠಾಣೆಗೆ ಬಂದಿದ್ದಾರೆ ಎಂದರೆ ಇದನ್ನು ವ್ಯವಸ್ಥಿತವಾಗಿ ಮಾಡಿರುವಂತೆ ಕಾಣುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT