ಬುಧವಾರ, ಸೆಪ್ಟೆಂಬರ್ 29, 2021
20 °C

ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕೆಲಕಾಲ ಚರ್ಚೆ ನಡೆಸಿದರು. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ಬಿಜೆಪಿ ಶಾಸಕ ವಿ. ಸೋಮಣ್ಣ ಜತೆಗಿದ್ದರು.

ಬಸವರಾಜ ಬೊಮ್ಮಾಯಿ ಮೂಲತಃ ಜನತಾ ಪರಿವಾರದವರು. ಜನತಾ ದಳದಲ್ಲಿದ್ದಾಗ ರಾಜಕೀಯವಾಗಿ ದೇವೇಗೌಡರ ಒಡನಾಡಿಯಾಗಿದ್ದರು. ಜನತಾದಳವು ಜಾತ್ಯತೀತ ಜನತಾದಳ ಹಾಗೂ ಸಂಯುಕ್ತ ಜನತಾದಳ ಎಂದು ವಿಭಜನೆಯಾದಾಗ, ಗೌಡರ ಜತೆಗೆ ಹೋಗದ ಬೊಮ್ಮಾಯಿ, ಸಂಯುಕ್ತ ಜನತಾದಳದಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ಅವರು ಬಿಜೆಪಿ ಸೇರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು