ಶನಿವಾರ, ಸೆಪ್ಟೆಂಬರ್ 18, 2021
30 °C

ನೂತನ ಸಚಿವರಿಗೆ 2 ದಿನಗಳಲ್ಲಿ ಖಾತೆ ಹಂಚಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನೂತನ ಸಚಿವರಿಗೆ ಎರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಚಿವರ ಪ್ರಮಾಣ ವಚನದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಖಾತೆಯಲ್ಲೇ ಮುಂದುವರಿಸಿ ಅಥವಾ ಇಂಥದ್ದೇ ಖಾತೆ ಕೊಡಿ ಎಂದು ಯಾರೂ ಕೇಳಿಲ್ಲ’ ಎಂದರು.

‘ಖಾತೆ ಹಂಚಿಕೆ ಬಗ್ಗೆ ನಾನೇ ತೀರ್ಮಾಬ ಮಾಡುತ್ತೇನೆ’ ಎಂದೂ ತಿಳಿಸಿದರು.

‘ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಾರ್ಯಪಡೆಯನ್ನು ಪುನರ್‌ರಚನೆ ಮಾಡಲಾಗುವುದು. ಪ್ರವಾಹದಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ತೆರಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು