ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ವೈಜ್ಞಾನಿಕವಾಗಿ ಚಿಂತನೆ: ಬೊಮ್ಮಾಯಿ

Last Updated 14 ಆಗಸ್ಟ್ 2021, 6:40 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಹೆಚ್ಚುತ್ತಿದೆ. ಹೆಚ್ಚಾದಾಗ ಕ್ರಮ ತೆಗೆದುಕೊಳ್ಳುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್‌.ಟಿ. ನಗರದಲ್ಲಿರುವ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಸಂಜೆ ಸಭೆ ನಡೆಯಲಿದೆ. ಸಭೆಯಲ್ಲಿ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತೇವೆ’ ಎಂದರು.

‘ಜನರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶ ಅಲ್ಲ. ಆದರೆ, ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಸಂಜೆ ಸಭೆಯ ಬಳಿಕ ಈ ಬಗ್ಗೆ ಮಾತನಾಡುತ್ತೇನೆ’ ಎಂದೂ ಹೇಳಿದರು.

ನನ್ನ ಸೌಭಾಗ್ಯ: ‘75ನೇ ಸ್ವಾತಂತ್ರ್ಯ ದಿನಾಚರಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. 75 ವರ್ಷ ನಡೆದು ಬಂದ ದಾರಿ, ನಡೆಯುವ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ’ ಎಂದರು.

‘ಹಲವಾರು ಸವಾಲುಗಳ ನಡುವೆ ನಮ್ಮ ಕನ್ನಡ ನಾಡು ದೇಶಕ್ಕೇ ಮಾದರಿಯಾಗಿದೆ. ನಾಡಿನ ಬಗ್ಗೆ ತಿಳಿಸುವ ಕೆಲಸ ಒಂದು ವರ್ಷ ಮಾಡುತ್ತೇವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT