ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಧಿಪೂರ್ವ ಚುನಾವಣೆ ಇಲ್ಲ: ಬಸವರಾಜ ಬೊಮ್ಮಾಯಿ

Last Updated 13 ಮಾರ್ಚ್ 2022, 20:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು,‘ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ತಕ್ಷಣ ದೆಹಲಿಗೆ ಹೋಗುತ್ತೇನೆ’ ಎಂದರು.

‘ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ. ಈಗಲೂ ಇಲ್ಲ. ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಆದರೆ, ಬೇರೆ ಪಕ್ಷದಿಂದ ಬಿಜೆಪಿ ಬರುವವರ ಬಗ್ಗೆ ಕಾದು ನೋಡಿ’ ಎಂದರು.

ರಾಜ್ಯ ಪ್ರವಾಸ: ‘ಇದೇ 30 ಮತ್ತು 31ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸದ ಕುರಿತು ಮತ್ತು ಎಲ್ಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಉಕ್ರೇನ್‌ನಲ್ಲಿ ಬಾಂಬ್ ದಾಳಿ ನಿಂತ ಕೂಡಲೇ ನವೀನ್ ಮೃತದೇಹವನ್ನು ತರುವ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲಾಗುವುದು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT