ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲು; ವರದಿ ಬಳಿಕ ಕ್ರಮ: ಬಸವರಾಜ ಬೊಮ್ಮಾಯಿ

Last Updated 24 ಸೆಪ್ಟೆಂಬರ್ 2021, 22:31 IST
ಅಕ್ಷರ ಗಾತ್ರ

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಪಂಚಮಸಾಲಿ ಸಮಯದಾಯ ಅಲ್ಲದೆ 15 ಸಮುದಾಯಗಳು ಮೀಸಲಾತಿ ಬಗ್ಗೆ ಬೇಡಿಕೆ ಇಟ್ಟಿವೆ. ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕಿದೆ. ಈ ಕೆಲಸವನ್ನು ಆಯೋಗ ಮಾಡುತ್ತಿದೆ. ಮರಾಠರಿಗೆ ಮೀಸಲಾತಿ ನೀಡುವಾಗ ಅಲ್ಲಿನ ಸರ್ಕಾರ ಈ ಅಂಶಗಳನ್ನು ಪರಿಗಣಿಸಲಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಸೋಲಾಯಿತು. ಏಕಾಏಕಿ ಮೀಸಲಾತಿ ನೀಡಿದರೆ ಸಮಸ್ಯೆ ಸೃಷ್ಟಿಯಾಗುತ್ತದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT